ಉಡುಪಿ ಉದ್ಯಾವರ ರಾಷ್ರೀಯ ಹೆದ್ದಾರಿಯಲ್ಲಿ ಬೈಕ್ ಅಪಘಾತ. ಸುಬ್ರಹ್ಮಣ್ಯದ ಯುವಕ ಮೃತ್ಯು.

ಜ.2 ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬೀಡಿನಗದ್ದೆ ನಿವಾಸಿಯಾದ ಯುವರಾಜ್ ಅವರು ಜನವರಿ 1ರ ತಡರಾತ್ರಿ, ಅಂದಾಜು ನಸುಕಿನ ವೇಳೆ 2.30ರ ಸುಮಾರಿಗೆ ಉಡುಪಿ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಸೇತುವೆಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಮಂಗಳೂರುದಿಂದ ಉಡುಪಿ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಅತಿವೇಗ ಹಾಗೂ ಅಜಾಗರೂಕ ಚಾಲನೆಯಿಂದ ಬೈಕ್ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ಪರಿಣಾಮ ಯುವರಾಜ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಉಚಿಲ ಎಸ್‌ಡಿಪಿಐ ಆಂಬ್ಯುಲೆನ್ಸ್ ಮೂಲಕ ಕೆಎಂ ಸಿರಾಜ್ ಹಾಗೂ ಜಲಾಲುದ್ದೀನ್ ಅವರು ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಿ ಶವಾಗಾರದಲ್ಲಿ ಇರಿಸಿದರು.
ಮೃತ ದುರ್ದೈವಿ ಯುವರಾಜ್ ತಂದೆ–ತಾಯಿ, ಸಹೋದರ ಹಾಗೂ ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.
