ಸುಳ್ಯ: ಗಾಂಧಿನಗರ ಮಹಾತ್ಮ ಗಾಂಧಿ ಆಟೋ ನಿಲ್ದಾಣ ಉದ್ಘಾಟನೆ ಹಾಗೂ ಲೋಕಾರ್ಪಣೆ

ಸುಳ್ಯದ ಗಾಂಧಿನಗರ ಮಹಾತ್ಮ ಗಾಂಧಿ ಆಟೋ ನಿಲ್ದಾಣದ ಉದ್ಘಾಟನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮವನ್ನು ದಿನಾಂಕ 06-01-2026 ಮಂಗಳವಾರ ಬೆಳಿಗ್ಗೆ 11.00 ಗಂಟೆಗೆ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಮಾನ್ಯ ವಿಧಾನ ಪರಿಷತ್ ಶಾಸಕರಾದ ಶ್ರೀ ಮಂಜುನಾಥ್ ಭಂಡಾರಿಯವರು (2024–26ನೇ ಸಾಲಿನ ಸ್ಥಾಯಿ ಸಮಿತಿ ಅಧ್ಯಕ್ಷರು) ಪ್ರಧಾನ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಪ್ರದೇಶದ ಅಭಿವೃದ್ಧಿಯ ದೃಷ್ಟಿಯಿಂದ, ಸುಳ್ಯದ ಗಾಂಧಿನಗರದ ನಿವಾಸಿಗಳ ಹಾಗೂ ಆಟೋ ಚಾಲಕರ ಬಹುಕಾಲದ ಬೇಡಿಕೆಯಾಗಿದ್ದ ಈ ಆಟೋ ನಿಲ್ದಾಣವನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ. ಕಾರ್ಯಕ್ರಮವು ಸುಳ್ಯ ಪಾರ್ಕ್ ಬಳಿ, ಗಾಂಧಿನಗರ ಸುಳ್ಯದಲ್ಲಿ ನಡೆಯಲಿದೆ.

ಸ್ಥಳೀಯ ಜನಪ್ರತಿನಿಧಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *