ಕಾಂಗ್ರೆಸ್ಸಿನಿಂದ ನರೇಗಾ ಬಚಾವೋ ಜನಾಂದೋಲನಕ್ಕೆ ನಿರ್ಧಾರ.
ಜ.8 ರಂದು ಬೆಂಗಳೂರಿನ ಖಾಸಾಗಿ ಹೋಟೆಲೊಂದರಲ್ಲಿ ನರೇಗಾ ವಿಷಯದಲ್ಲಿ ರಾಷ್ಟ್ರ ವ್ಯಾಪಿ ನಡೆಸಲುದ್ದೇಶಿರುವ ನರೇಗಾ ಬಚಾವೋ ಜನಾಂದೋಲನದ ಬಗ್ಗೆ ಚರ್ಚಿಸಲು ಪ್ರದೇಶ್ ಕಾಂಗ್ರೆಸ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ರದ್ದು ಮಾಡಿ, ಕೋಟ್ಯಂತರ ಬಡಜನರಿಗೆ ಉದ್ಯೋಗದ ಖಾತರಿಯೂ ಇಲ್ಲದ, ಮಹಾತ್ಮ ಗಾಂಧಿಯವರ ಹೆಸರಿನ ನೈತಿಕ ಬಲವೂ ಇಲ್ಲದ ವಿಬಿ ಜಿ ರಾಮ್ ಜಿ ಯೋಜನೆಯನ್ನು ಜಾರಿ ಮಾಡುತ್ತಿರುವುದು ಗ್ರಾಮೀಣ ಭಾರತದ ಆರ್ಥಿಕತೆಗೆ ನೀಡುತ್ತಿರುವ ಕೊಡಲಿಯೇಟು.

ಈಗ ಈ ಅನ್ಯಾಯದ ವಿರುದ್ಧ ಧ್ವನಿಯೆತ್ತದೆ ಸುಮ್ಮನಾದರೆ ಮುಂದೆ ಕರಾಳ ದಿನಗಳನ್ನು ಎದುರಿಸಲು ದೇಶ ಸಿದ್ಧವಾಗಬೇಕಿದೆ. ಎನ್ನುವ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.
ಈ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಹಮ್ಮಿಕೊಂಡಿರುವ ರಾಷ್ಟ್ರವ್ಯಾಪಿ “ನರೇಗಾ ಉಳಿಸಿ” ಜನಾಂದೋಲನ ಆಯೋಜನೆ ಕುರಿತು ಕೆ.ಪಿ.ಸಿ.ಸಿ ಅಧ್ಯಕ್ಷರಾದ ಶ್ರೀ. ಡಿ.ಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ನೇತೃತ್ವದಲ್ಲಿ ರಾಜ್ಯದ ಶಾಸಕರ ಜೊತೆ ಸಮಾಲೋಚನಾ ಸಭೆ ನಡೆಯಿತು.

ಈ ಸಭೆಯ ವೇದಿಕೆಯಲ್ಲಿ ಉಪಮುಖ್ಯಮಂತ್ರಿ ಶ್ರೀ ಡಿ.ಕೆ ಶಿವಕುಮಾರ್, ಮುಖ್ಯ ಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಎ.ಐ.ಸಿ.ಸಿ ಪ್ರಮುಕರು ವಿದಾನಪರಿಷತ್ ಸದಸ್ಯರಾದ ಶ್ರೀ ಬಿ.ಕೆ ಹರಿಪ್ರಸಾದ್ ಸಚಿವರಾದ ಕೆ.ಜೆ ಜಾರ್ಜ್,ಹೆಚ್.ಸಿ.ಮಹದೇವಪ್ಪ, ಜಿ.ಪರಮೇಶ್ವರ್,ಹೆಚ್.ಕೆ.ಪಾಟೀಲ್, ಕೆ.ಹೆಚ್.ಮುನಿಯಪ್ಪ,ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯಕುಮಾರ್ ಸೊರಕೆ ಉಪಸ್ತಿತರಿದ್ದರು. ಮತ್ತು ಸಭೆಯಲ್ಲಿ ರಾಜ್ಯದ ಎಲ್ಲಾ ಶಾಸಕರು ವಿಧಾನ ಪರಿಷತ್ ಸದಸ್ಯರು ಉಪಸ್ತಿತರಿದ್ದರು. ಮತ್ತು ರಾಜ್ಯದಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ತೀರ್ಮಾನಿಸಲಾಗಿದೆ
ಎಂದು ತಿಳಿದು ಬಂದಿದೆ.

