“ಮಾನವ ಸೇವೆಯಲ್ಲಿ ತೊಡಗಿದ್ದ ಮಹಾತ್ಮನ ಸ್ಮರಣೆಯಲ್ಲಿ ಸಿದ್ಧಗಂಗಾ ಕ್ಷೇತ್ರದಲ್ಲಿ ದಿವ್ಯ ಭಕ್ತಿಯ ಸಂಗಮವಾಗಿದೆ.’-ಸಂಸದ ಪದ್ಮಶ್ರೀ ಡಾ. ಸಿ ಎನ್ ಮಂಜುನಾಥ್”

ಪ್ರಜಾವಾರ್ತೆ:
ಜ.21 ತುಮಕೂರು:
ಇಂದು ತುಮಕೂರಿನಲ್ಲಿ ದಿವಂಗತ ಶ್ರೀ ಶ್ರೀ ಶಿವಕುಮಾರಸ್ವಾಮೀಜಿಯವರ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮ ಜರಗಿತು.
ಈ ಐತಿಹಾಸಿಕ ಹಾಗೂ ಮಹತ್ವಪೂರ್ಣ ಕಾರ್ಯಕ್ರಮದಲ್ಲಿ, ಸಮಾಜಸೇವೆಯ ಸಂಕೇತವಾಗಿದ್ದ ಶ್ರೀ ಸ್ವಾಮೀಜಿಯವರ ಆದರ್ಶಗಳನ್ನು ಸ್ಮರಿಸುತ್ತಾ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಪದ್ಮಶ್ರೀ ಡಾ. ಸಿ. ಎನ್. ಮಂಜುನಾಥ್ ರವರು ಶ್ರೀ ಸ್ವಾಮೀಜಿಯವರ ಗದ್ದುಗೆಯಲ್ಲಿ ಭಕ್ತಿಭಾವದಿಂದ ಪೂಜೆ ಸಲ್ಲಿಸಿ, ಧಾರ್ಮಿಕ ಶ್ರದ್ಧೆ ಹಾಗೂ ಗೌರವಪೂರ್ವಕವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ದಿವ್ಯ ಕಾರ್ಯಕ್ರಮಕ್ಕೆ ಪರಮಪೂಜ್ಯ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ಅಧ್ಯಕ್ಷರು – ಶ್ರೀ ಸಿದ್ಧಗಂಗಾಮಠ, ಪರಮಪೂಜ್ಯ ಜಗದ್ಗುರು ಸದ್ಗುರು ಶ್ರೀ ಮಧುಸೂದನ ಸಾಯಿ, ಸಂಸ್ಥಾಪಕರು – ಶ್ರೀ ಮಧುಸೂದನ್ ಸಾಯಿ ಗ್ಲೋಬಲ್ ಹ್ಯೂಮಾನಿಟೇರಿಯನ್ ಮಿಷನ್, ಪರಮಪೂಜ್ಯ ಶ್ರೀ ಶ್ರೀ ಶಿವಸಿದ್ದೇಶ್ವರ ಮಹಾಸ್ವಾಮಿಗಳು,ಉತ್ತರಾಧಿಕಾರಿಗಳು – ಶ್ರೀ ಸಿದ್ಧಗಂಗಾಮಠ. ಇವರು ದಿವ್ಯ ಸಾನಿಧ್ಯ ವಹಿಸಿ ಕಾರ್ಯಕ್ರಮಕ್ಕೆ ಆಧ್ಯಾತ್ಮಿಕ ಸ್ಪರ್ಶವನ್ನು ನೀಡಿದರು.

ಈ ಶುಭ ಸಂದರ್ಭದಲ್ಲಿ ಭಾರತದ ಘನವೆತ್ತ ಉಪರಾಷ್ಟ್ರಪತಿಗಳಾದ ಶ್ರೀ ಸಿ ಪಿ ರಾಧಾಕೃಷ್ಣ , ಕರ್ನಾಟಕ ರಾಜ್ಯದ ಘನವೆತ್ತ ರಾಜ್ಯಪಾಲರಾದ ಶ್ರೀ ಥಾವರ್‌ಚಂದ್ ಗೆಹ್ಲೋಟ್ , ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ , ಕರ್ನಾಟಕ ರಾಜ್ಯದ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್ , ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಮಕ್ತಪ್ಪ ಕಾರಜೋಳ್ , ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶ್ರೀ ಬಿ. ಸುರೇಶ್ ಗೌಡ, ಸಿರಾ ಕ್ಷೇತ್ರದ ಶಾಸಕರು ಹಾಗೂ ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಗಳಾದ ಶ್ರೀ ಟಿ. ಬಿ. ಜಯಚಂದ್ರ, ತುಮಕೂರು ಪಟ್ಟಣ ಕ್ಷೇತ್ರದ ಶಾಸಕರಾದ ಶ್ರೀ ಜಿ. ಬಿ. ಜ್ಯೋತಿ ಗಣೇಶ್ , ಸೇರಿದಂತೆ ಅನೇಕ ಗಣ್ಯರು ಮತ್ತು ವಿವಿಧ ಮಠಾಧೀಶರು, ಧಾರ್ಮಿಕ ಮುಖಂಡರು, ಹಾಗೂ ಅಪಾರ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *