‘ಗೃಹಲಕ್ಷ್ಮಿ’ 2 ತಿಂಗಳ ಹಣ ಬಿಡುಗಡೆ!
ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗ್ರಹಲಕ್ಷ್ಮೀ ಯೋಜನೆಯ ಬಾಕಿ ಎರಡು ತಿಂಗಳ ಹಣ ಬಿಡುಗಡೆ ಮಾಡಿರುವುದಾಗಿ ತಿಳಿಸಿರುತ್ತಾರೆ.

ಅವರು ಮಾತನಾಡುತ್ತಾ ಇತ್ತೀಚೆಗೆ ರಾಜಕೀಯದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಜನರನ್ನು ಒಡೆದು ವಿಭಜಿಸುವ ಪ್ರಯತ್ನಗಳು ನಡೆಯುತ್ತಿವೆ. ಎಂಬುದಾಗಿ ಟೀಕಿಸಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ಸಮನವಾಗಿ ತಲುಪುತ್ತಿವೆ ಎಂದರು.
ಲಕ್ಷಾಂತರ ಜನರಿಗೆ ಗೃಹಲಕ್ಷ್ಮೀ ಹಣ ಬಂದಿದೆ. ಇದರಿಂದ ಮಹಿಳೆಯರು ಗುಣಮಟ್ಟದ ಜೀವನ ನಡೆಸುವಂತಾಗಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಜನರ ಜೀವನ ಉತ್ತಮಗೊಂಡಿದೆ ಎಂಬುದಾಗಿ ತಿಳಿಸಿದರು.

