ಹೊಸ ವರ್ಷಾಚರಣೆಗೆ ರಾಜ್ಯಾದ್ಯಂತ ಕಟ್ಟೆಚ್ಚರ

ಬೆಂಗಳೂರು: ಡಿ.31-ಹೊಸ ವರ್ಷಾಚರಣೆ ಸಂಭ್ರಮಾಚರಣೆ ಸಂದರ್ಬದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ರಾಜ್ಯಾದ್ಯಂತ ಅಭೂತಪೂರ್ವ ಪೊಲೀಸ್ ಬಂದೋಬಸ್ತು ಕೈಗೊಳ್ಳಲಾಗಿದೆ.

ಬೆಂಗಳೂರು, ಮೈಸೂರು,ಮಂಗಳೂರು, ಹುಬ್ಬಳ್ಳಿ – ಧಾರವಾಡ, ಬೆಳಗಾವಿ, ಕಲಬುರಗಿ ಸೇರಿದಂತೆ ರಾಜ್ಯ ಮಹಾನಗರಗಳು ಜಿಲ್ಲಾ, ಪ್ರಮುಖ ತಾಲ್ಲೂಕು ಕೇಂದ್ರಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಿ ಪರಿಸ್ಥಿತಿಯ ಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ.

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಇಂದು ರಾತ್ರಿಯಿಂದ ನಾಳೆ ಬೆಳಿಗ್ಗೆಯವರೆಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಹೊಸವರ್ಷದ ಸಂಭ್ರಮಾಚರಣೆ ನಡೆಯುವ ಪ್ರಮುಖ ಪ್ರದೇಶಗಳು ರಸ್ತೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿ ಜನ ಸಂದಣಿ ನಿಯಂತ್ರಿಸಿ ಅವರ ಮೇಲೆ ಕಣ್ಣಿಡಲು ಡ್ರೋನ್ ಕ್ಯಾಮರಾಗಳ ವ್ಯವಸ್ಥೆ ಮಾಡಲಾಗಿದೆ.
ಕುಡಿದು ವಾಹನ ಚಲಾಯಿಸುವವರ ವಿಶೇಷ ತಪಾಸಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

ರಾಜ್ಯದ ಹೆಚ್ಚು ಜನ ಸೇರುವ ರೆಸ್ಟೋರೆಂಟ್ ಗಳು ರೆಸಾರ್ಟ್ ಬಾರ್ ಆಂಡ್ ರೆಸ್ಟೋರೆಂಟ್ ಗಳು ಪ್ರವಾಸಿ ಕೇಂದ್ರಗಳಿಗೆ ಭದ್ರತೆ ಕೈಗೊಂಡು ತೀವ್ರ ನಿಗಾವಹಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಬಂದೋಬಸ್ತ್ ಕಲ್ಪಿಸಲಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯಾದ್ಯಂತ ಒಟ್ಟು 66 ಹೋಂ ಸ್ಟೇ, 40 ಕ್ಕೂ ಹೆಚ್ಚು ರೆಸಾರ್ಟ್‌ಗಳೂ ಸೇರಿದಂತೆ ಅನೇಕ ಪ್ರೇಕ್ಷಣೀಯ ಸ್ಥಳಗಳಿವೆ. ಈಗಾಗಲೇ ಹೋಂ ಸ್ಟೇ ಹಾಗೂ ರೆಸಾರ್ಟ್ ಮಾಲೀಕರೊಂದಿಗೆ ಮಾತನಾಡಿದ್ದು, ಸರ್ಕಾರದ ನಿಯಮದಂತೆ ಪೂರ್ವಾನುಮತಿ ಕಡ್ಡಾಯಗೊಳಿಸಲಾಗಿದೆ. ಇದಲ್ಲದೇ ಜಿಲ್ಲೆಯಾದ್ಯಂತ 700ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಹೊಸ ವರ್ಷಾಚರಣೆ ವಾರ್‌ರೂಮ್‌ನಲ್ಲಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಪೊಲೀಸ್ ಅಧಿಕಾರಿಯೊಬ್ಬರು ವೀಕ್ಷಣೆ ಮಾಡುತ್ತಿರುವುದು.
ಬೆಂಗಳೂರು,ಡಿ.31-ಹೊಸ ವರ್ಷಾಚರಣೆ ಸಂಭ್ರಮಾಚರಣೆ ಹಿನ್ನಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ರಾಜ್ಯಾದ್ಯಂತ ಅಭೂತಪೂರ್ವ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಬೆಂಗಳೂರು, ಮೈಸೂರು,ಮಂಗಳೂರು, ಹುಬ್ಬಳ್ಳಿ ಧಾರವಾಡ,ಬೆಳಗಾವಿ, ಕಲಬುರಗಿ ಸೇರಿದಂತೆ ರಾಜ್ಯ ಮಹಾನಗರಗಳು ಜಿಲ್ಲಾ, ಪ್ರಮುಖ ತಾಲ್ಲೂಕು ಕೇಂದ್ರಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಿ ಪರಿಸ್ಥಿತಿಯ ಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ.

ರಾಮನಗರ, ಕೋಲಾರ, ಮೈಸೂರು ಸೇರಿದಂತೆ ರಾಜ್ಯಾದ್ಯಂತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಯಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.

ಪ್ರೇಕ್ಷಣೀಯ ಸ್ಥಳಗಳಾದ ಸಂಗಮ, ಮೇಕೆದಾಟು, ಶ್ರೀರಾಮದೇವರಗಡ್ಡ, ರೇವಣಸಿದ್ದೇಶ್ವರ ಬೆಟ್ಟ, ಸಾವನದುರ್ಗಬೆಟ್ಟ ಸೇರಿದಂತೆ ಹಲವು ಸ್ಥಳಗಳಲ್ಲಿ 31ರ ರಾತ್ರಿಯಿಂದಲೇ ನಿಷೇಧಾಜ್ಞೆ ಹೊರಡಿಸಲಾಗಿದೆ. ಯಾರೂ ಕೂಡ ರಾತ್ರಿ ಸಂಚಾರ ನಡೆಸದಂತೆ ಕ್ರಮ ಕೈಗೊಳ್ಳಲಾಗಿದೆ” ಎಂದರು.

ಹೆದ್ದಾರಿಯಲ್ಲಿ ಭದ್ರತೆ:

ಹೆದ್ದಾರಿಯಲ್ಲೂ ಕೂಡ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದ್ದು, ಕುಡಿದು ವಾಹನ ಚಾಲನೆ ಮಾಡುವವರನ್ನು ಹಿಡಿಯುವುದಕ್ಕಾಗಿಯೇ 2೦ಕ್ಕೂ ಹೆಚ್ಚು ತಪಾಸಣೆ ಕೇಂದ್ರ ಸ್ಥಾಪಿಸಲಾಗಿದೆ. ಯಾರೂ ಕೂಡ ಕುಡಿದು ವಾಹನ ಚಾಲನೆ ಮಾಡಬೇಡಿ. ಹೆದ್ದಾರಿಯಲ್ಲಿ ವೀಲಿಂಗ್ ಮಾಡಿದರೆ ಕ್ರಮ ಜರುಗಿಸಲಾಗುವುದು” ಎಂದು ಎಸ್ಪಿ ಎಚ್ಚರಿಕೆ ನೀಡಿದ್ದಾರೆ.

ಮಾರ್ಗಸೂಚಿ ಬಿಡುಗಡೆ:

ಕೋಲಾರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. 31ರ ಮಧ್ಯರಾತ್ರಿ 12:30ರವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶ ನೀಡಲಾಗಿದೆ. 12:30ರ ನಂತರ ಯಾವುದೇ ಸಂಭ್ರಮಾಚರಣೆಗಳಿಗೆ ಅವಕಾಶ ಇಲ್ಲ. ಈ ಬಗ್ಗೆ ಎಲ್ಲ ಹೋಟೆಲ್, ರೆಸ್ಟೋರೆಂಟ್, ಬಾರ್‌ಗಳಿಗೆ ಮಾರ್ಗಸೂಚಿ ಹೊರಡಿಸಲಾಗಿದೆ.

ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸರ ಕಟ್ಟೆಚ್ಚರ ವಹಿಸಲಾಗಿದೆ. ಹೆದ್ದಾರಿಗಳಲ್ಲಿ ವೀಲಿಂಗ್ ಹಾವಳಿ ತಡೆಯಲು ವಿಶೇಷ ತಂಡ ರಚಿಸಲಾಗಿದೆ. ಹೆದ್ದಾರಿಗಳಲ್ಲಿ ವೀಲಿಂಗ್ ಮಾಡುವುದು ಕಂಡುಬಂದರೆ ದೂರು ದಾಖಲಿಸಿಕೊಳ್ಳಲಾಗುತ್ತದೆ. ರಾಷ್ಟ್ರೀಯ ಹೆದ್ದಾರಿ 75ರ ಎಲ್ಲ ಫ್ಲೈ ಓವರ್‌ಗಳಲ್ಲಿ 31ರ ರಾತ್ರಿ ವಾಹನ ಸಂಚಾರ ನಿಷೇಧಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಬಗ್ಗೆ ಜಾಗರೂಕರಾಗಿರಿ. ಮಕ್ಕಳ ಚಲನವಲನಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಿರಿ. ಸಂಭ್ರಮಾಚರಣೆಯಲ್ಲಿ ಕುಡಿದು ವಾಹನ ಚಲಾಯಿಸಬೇಡಿ, ಮದ್ಯಪಾನ ಮಾಡುವುದಾದರೆ ತಮ್ಮ ತಮ್ಮ ಮನೆಗಳಲ್ಲಿ ಸಂಭ್ರಮಾಚರಣೆ ಮಾಡಿ, ಕುಡಿದು ವಾಹನ ಚಲಾಯಿಸಿದರೆ ಪ್ರಕರಣಗಳನ್ನು ಕಟ್ಟುನಿಟ್ಟಾಗಿ ದಾಖಲಿಸಿ ನ್ಯಾಯಾಲಯಕ್ಕೆ ಕಳುಹಿಸುತ್ತೇವೆ ಎಂದು ಅಧಿಕಾರಿಗಳು ತಿಳಿಸಿರುತ್ತಾರೆ.

ಚಾಮುಂಡಿ ಬೆಟ್ಟಕ್ಕೆ ಭದ್ರತೆ:

ಜ.1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಜಿ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

ಚಾಮುಂಡಿ ಬೆಟ್ಟದಲ್ಲಿ ಜ.2ರಂದು ಲಲಿತಾ ಸಹಸ್ರನಾಮ ಕಾರ್ಯಕ್ರಮ, ಜ.3 ಹಾಗೂ 4ರಂದು ವಾರಾಂತ್ಯವಿದ್ದು, ದರ್ಶನಕ್ಕೆ ಬರುವ ಭಕ್ತರ ನಡುವೆ ನೂಕುನುಗ್ಗಲು ಉಂಟಾಗದಂತೆ ಸರದಿ ಸಾಲುಗಳನ್ನು ಹೆಚ್ಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸುಗಮ ವಾಹನ ಸಂಚಾರಕ್ಕೆ ಹಾಗೂ ವಾಹನ ನಿಲುಗಡೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಿ. ಹೆಚ್ಚಿನ ಜನದಟ್ಟಣೆ ಉಂಟಾದ ಸಂದರ್ಭದಲ್ಲಿ ಗಣ್ಯ ವ್ಯಕ್ತಿಗಳ ವಾಹನಗಳನ್ನು ಸಹ ಮಹಿಷಾಸುರ ಪ್ರತಿಮೆ ಬಳಿ ನಿಲ್ಲಿಸಿ ನಂತರ ಬ್ಯಾಟರಿಚಾಲಿತ ವಾಹನದ ವ್ಯವಸ್ಥೆ ಮಾಡುವುದು ಉತ್ತಮ ಎಂದು ಸಲಹೆ ನೀಡಿದರು.

ಕುಡಿಯುವ ನೀರು:

ಕುಡಿಯುವ ನೀರಿನ ವ್ಯವಸ್ಥೆಗಳನ್ನು ಹೆಚ್ಚಿನ ಸ್ಥಳಗಳಲ್ಲಿ ಮಾಡಿ. ಸ್ವಚ್ಛತೆ ಕಪಾಡಲು ಹೆಚ್ಚಿನ ಸ್ವಚ್ಛತಾ ಸಿಬ್ಬಂದಿಯನ್ನು ನಿಯೋಜಿಸಿ. ಕೆಎಸ್‌ಆರ್‌ಟಿಸಿ ನಗರ ವಿಭಾಗದಿಂದ ಹೆಚ್ಚಿನ ಬಸ್ ಟ್ರಿಪ್‌ಗಳನ್ನು ಮಾಡುವಂತೆಯೂ ನಿರ್ದೇಶನ ಕೊಟ್ಟರು.

ಆರೋಗ್ಯ ಇಲಾಖೆಯ ವತಿಯಿಂದ ಆಂಬ್ಯುಲೆನ್ಸ್ ನಿಯೋಜಿಸಬೇಕು ಹಾಗೂ ದಾನಿಗಳು ನೀಡುವ ಆಹಾರ ಪದಾರ್ಥಗಳಲ್ಲಿ ದಾಸೋಹ ಭವನದಲ್ಲಿ ಪ್ರಸಾದ ಸಿದ್ಧಪಡಿಸಿದರೂ ನೀಡುವ ಆಹಾರ ಪದರ್ಥಗಳ ಗುಣಮಟ್ಟ ಪರಿಶೀಲಿಸಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಚಾಮುಂಡಿ ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿ ದೇವಸ್ಥಾನದ ಅರ್ಚಕರು ಸೇರಿದಂತೆ ಇತರೆ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಏನೇನಿರಲ್ಲ?

ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವಪ್ರಸಿದ್ಧ ಪ್ರವಾಸಿತಾಣ ನಂದಿಗಿರಿಧಾಮಕ್ಕೆ ಡಿಸೆಂಬರ್ 31ರ ಮಧ್ಯಾಹ್ನ 2 ಗಂಟೆಯಿಂದ ಜನವರಿ 1ರ ಬೆಳಗ್ಗೆ 10 ಗಂಟೆಯವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳಿಗೆ ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಿರ್ಬಂಧ ಹೇರಲಾಗಿದೆ.

ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಧ್ಯರಾತ್ರಿ 12.30ರವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ ನೀಡಲಾಗಿದೆ. ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಕೊಡಗು ಜಿಲ್ಲೆಯಲ್ಲಿ ರಾತ್ರಿ 10 ಗಂಟೆಯ ಬಳಿಕ ಒಳಾಂಗಣದಲ್ಲಿ ಮಾತ್ರ ಪಾರ್ಟಿ ಮಾಡಲು ಅವಕಾಶ.

ಬೆಂಗಳೂರಿನ ಚರ್ಚ್ ಸ್ಟ್ರೀಟ್, ಎಂಜಿ ರಸ್ತೆಯಲ್ಲಿ ಒಮ್ಮೆ ಹೋಗಿ ಹೊರಹೋದವರಿಗೆ ಮರಳಿ ಎಂಟ್ರಿ ಇಲ್ಲ. ನಮ್ಮ ಮೆಟ್ರೋ ಎಂಜಿ ರಸ್ತೆ, ಟ್ರಿನಿಟಿ ನಿಲ್ದಾಣ ಬಂದ್. ಬೆಂಗಳೂರಿನಲ್ಲಿ ಸಂಜೆ 6 ರ ನಂತರ ಪಾರ್ಕ್‌ಗಳು ಬಂದ್. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್‌ಗಳಲ್ಲಿ ಸಂಜೆಯ ನಂತರ ವಾಹನ ಸಂಚಾರ ಬಂದ್.

ಏನೇನಿರುತ್ತೆ?

ಬೆಂಗಳೂರಿನಲ್ಲಿ ತಡರಾತ್ರಿ 2 ಗಂಟೆ ವರೆಗೆ ಬಿಎಂಟಿಸಿ ಬಸ್,ಮುಂಜಾನೆ 3 ಗಂಟೆವರೆಗೆ ನಮ್ಮ ಮೆಟ್ರೋ ರೈಲು ಸೇವೆ. ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಪಬ್, ಬಾರ್, ರೆಸ್ಟೋರೆಂಟ್‌ಗಳು ತಡರಾತ್ರಿ ವರೆಗೂ ಕಾರ್ಯಾಚರಿಸಲಿವೆ. ಅಂಗಡಿಗಳು, ವಾಣಿಜ್ಯ ಮಳಿಗೆಗಳಿಗೆ ರಾತ್ರಿ 1 ರ ವರೆಗೂ ಕಾರ್ಯಾಚರಣೆಗೆ ಅನುಮತಿ ಇದೆ.

ಕರಾವಳಿ ನಗರಗಳಾದ ಮಂಗಳೂರು, ಉಡುಪಿಗಳಲ್ಲಿ ಬೀಚ್ ಬದಿಯ ರೆಸಾರ್ಟ್‌ಗಳು, ಹೋಮ್ ಸ್ಟೇಗಳು ತೆರೆದಿರಲಿವೆ. ಮಂಗಳೂರು ನಗರದಲ್ಲಿ ರಾತ್ರಿ 12:30 ರೊಳಗೆ ಹೊಸ ವರ್ಷ ಆಚರಣೆ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ.

Leave a Reply

Your email address will not be published. Required fields are marked *